ಮುಂಬೈ: ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಮಣಿಸಿದ ಭಾರತೀಯ ಮಹಿಳಾ ತಂಡ,

ಚೊಚ್ಚಲ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ತಂಡವು ದಾಖಲೆಯ ಮೊತ್ತದ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.





