Sat. Nov 8th, 2025

Belthangady: ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರವರ ಮುಖೇನ ಮಾನ್ಯ ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ: ಹಿಂದೂ ಧರ್ಮದ ಪರವಾಗಿ ಸಮಾಜ ಪರಿವರ್ತನೆ ಕಾರ್ಯ ಮಾಡುತ್ತಿರುವ ಪ. ಪೂ. ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ಮೇಲೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಪ್ರವೇಶ ನಿಷೇದಿರಿಸುವುದು ಸಂಪೂರ್ಣವಾಗಿ ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಆಗಿದ್ದು, ಧಾರ್ಮಿಕ ಸಹಿಷ್ಣುತೆಗೂ ಧಕ್ಕೆಯಾಗಿದೆ. ಆದ್ದರಿಂದ ಮಾನ್ಯ ರಾಜ್ಯಪಾಲರು ಈ ನಿಷೇಧದ ವಿಚಾರದಲ್ಲಿ ಸಂವಿಧಾನ ಪ್ರಕಾರ ಸೂಕ್ತ ತನಿಖೆ ನಡೆಸಿ ಈ ನಿಷೇಧವನ್ನು ತಕ್ಷಣ ರದ್ದುಪಡಿಸಲು ರಾಜ್ಯ ಸರ್ಕಾರಕ್ಕೆ ನಿರ್ಧರಿಸಲು ವಿನಂತಿಸುತ್ತೇವೆ.

ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಕಳೆದ ಶತಮಾನಗಳಿಂದ ರಾಷ್ಟ್ರದ ಸಂಕಷ್ಟದ ಸಂದರ್ಭಗಳಲ್ಲಿ ಸಂಘವು ನಿರಪೇಕ್ಷ ಸೇವೆ ಸಲ್ಲಿಸಿರುವುದು ರಾಷ್ಟ್ರಪ್ರೇಮದ ನಿದರ್ಶನವಾಗಿದೆ. ಇಂತಹ ಸಂಸ್ಥೆಯ ಮೇಲೆ ಕೋಮುವಾದ ದ್ವೇಷ ಅಥವಾ ಸಂವಿಧಾನ ಬಾಹಿರ ಕ್ರಿಯೆಗಳಲ್ಲಿ ತೊಡಗಿದೆ ಎಂಬ ಆರೋಪಗಳನ್ನು ರಾಜಕೀಯ ಉದ್ದೇಶಕ್ಕಾಗಿ ಮಾಡುವುದು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ದಂಡನೀಯ ಅಪರಾಧವಾಗಿದೆ. ಸರಕಾರವು ಕೂಡಲೆ ಸಂಘದ ವಿರುದ್ಧ ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ.

ಅದೇ ರೀತಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆಯಾಗಿದ್ದು, ಕೇಂದ್ರ ಸರಕಾರದ ಆಜ್ಞೆ ಪ್ರಕಾರ ಸರ್ಕಾರಿ ನೌಕರರು ಸಾಮಾಜಿಕ ಸಂಸ್ಥೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿಲ್ಲ. ಹೀಗಿರುವಾಗ ಸರಕಾರಿ ನೌಕರರು ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ ಕಾರಣಕ್ಕೆ ಅವರನ್ನು ಅಮಾನತು ಮಾಡಿರುವುದು ಅಧಿಕಾರದ ದುರ್ಬಳಕೆ ಹಾಗೂ ಸಂವಿಧಾನ ಬಾಹಿರ ಕ್ರಮವಾಗಿದೆ. ಆದ್ದರಿಂದ ಅವರ ಅಮಾನತು ಆದೇಶವನ್ನು ತಕ್ಷಣ ರದ್ದುಪಡಿಸಲು ಹಾಗೂ ಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಾವು ವಿನಂತಿಸುತ್ತೇವೆ.

ಈ ಸಂದರ್ಭದಲ್ಲಿ ಶ್ರೀ ಉಮೇಶ ಬಂಗೇರ ಕಾರ್ಯದರ್ಶಿಗಳು ಶ್ರೀ ಮಹಮಾಯಿ ಭಜನಾ ಮಂದಿರ ಪಿಲ್ಯ, ಶ್ರೀ ಯೋಗೀಶ್, ನಿಕಟ ಪೂರ್ವ ಅಧ್ಯಕ್ಷರು ಕೊಕ್ಕಡ ಪಂಚಾಯತ್, ರಾಮನಾಥ ಮದಡ್ಕ, ಕೇಶವ ಅಚ್ಚಿನಡ್ಕ, ತಾರಾನಾಥ್ ಕಳೆಂಜ, ಯೋಗೀಶ್ ಕೆಂಬರ್ಜೆ ಹಾಗೂ ಹರೀಶ್ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *