ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ಸುಪುತ್ರಿ ಶ್ರದ್ದಾ ಅಮಿತ್ ಹೇಳಿದರು.

ಇದನ್ನೂ ಓದಿ: 🟣ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ.ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ
ಅವರು ಶನಿವಾರ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಯೋಜನೆಯ ಪ್ರಯೋಜನ ಸದಸ್ಯರಿಗೆ ಸಿಗಬೇಕಾದರೆ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ಯೋಜನೆ ಮತ್ತು ಸದಸ್ಯರ ಮಧ್ಯೆ ಕೊಂಡಿಗಳಾಗಿ ಕಾರ್ಯನಿರ್ವಹಿಸಬೇಕು, ವೀರೇಂದ್ರ ಹೆಗ್ಡೆಯವರು ವ್ಯಕ್ತಿ ಗೌರವಕ್ಕೆ ಬಹಳ ಪ್ರಾಮುಖ್ಯತೆ ಕೊಡುತ್ತಾರೆ, ಆದುದರಿಂದ ಯೋಜನೆಯ ಸದಸ್ಯರ ಗೌರವಕ್ಕೆ ಕೊರತೆ ಬಾರದ ರೀತಿಯಲ್ಲಿ ಮಾನವಿತೆಯಿಂದ ವ್ಯವಹರಿಸಿ ಯೋಜನೆಯ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಜವಾಬ್ದಾರಿ ಯೋಜನೆಯ ಮೇಲ್ವಿಚಾರಕರಲ್ಲಿದೆ ಎಂದರು.



ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಕಚೇರಿ ಉಡುಪಿಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಜಿಲ್ಲಾ ನಿರ್ದೇಶಕ ದಿನೇಶ್, ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಅಧಿಕಾರಿ ಮಹಾವೀರ ಅರ್ಜಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಯೋಜನಾ ಕಚೇರಿಯ ಯೋಜನಾಧಿಕಾರಿಗಳು, ಎಲ್ಲಾ ಮೇಲ್ವಿಚಾರಕರು, ಯೋಜನಾ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


