ಉಜಿರೆ: ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರೆನಿಸಿದ ಶ್ರೀ ಕನಕದಾಸರ ಜಯಂತಿಯನ್ನು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು.

ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು. 10ನೇ ತರಗತಿ ವಿದ್ಯಾರ್ಥಿನಿಯಾದ ಕುಮಾರಿ ಅಂಶಿಕ ಇವರು ಕನಕದಾಸರ ಜೀವನ ಹಾಗೂ ಅವರ ಸಾಮಾಜಿಕ ಸುಧಾರಣೆಯ ಬಗ್ಗೆ ಮಾತುಗಳನ್ನಾಡಿದರು.

ಪ್ರಾಂಶುಪಾಲರಾದ ವಂ!ಫಾ ವಿಜಯ್ ಲೋಬೊ, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.




