ಉಜಿರೆ:(ನ.8) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯು ಮಂಗಳೂರಿನ ಪಿಲಿಕುಳದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿದ್ದು, ಬುಲ್ ಬುಲ್ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.





