ಬೆಂಗಳೂರು(ನ.10): ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಗಿರಿನಗರದಲ್ಲಿ ನಡೆದಿದೆ. ಗಗನ್ ರಾವ್ ನೇಣಿಗೆ ಶರಣಾದ ಪತಿ. ದಂಪತಿ ನಡುವೆ ನಿತ್ಯವೂ ಜಗಳ ನಡೆಯುತ್ತಿತ್ತು.

ಇದನ್ನೂ ಓದಿ: ⭕ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ಪತ್ನಿ ಕಿರುಕುಳದಿಂದ ನೊಂದ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗಗನ್ ರಾವ್, ಎಂಟು ತಿಂಗಳ ಹಿಂದೆ ಮೇಘನಾ ಜತೆ ಮದುವೆಯಾಗಿದ್ದರು.
ಮನೆಯಲ್ಲಿ ನಿತ್ಯ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಪತ್ನಿ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಗನ್ ರಾವ್ ಸಹೋದರಿ ಮೇಘನಾ ವಿರುದ್ಧ ದೂರು ನೀಡಿದ್ದಾರೆ.





