Mon. Nov 10th, 2025

Dharmasthala: (ನ.15- 19) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಧರ್ಮಸ್ಥಳ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 15 ರಿಂದ 19ರ ವರೆಗೆ ನಡೆಯಲಿವೆ. ನ. 18 ರಂದು ಮಂಗಳವಾರ ಸಂಜೆ ಗಂಟೆ 5 :00 ರಿಂದ ಸರ್ವಧರ್ಮ ಸಮ್ಮೇಳನದ ಅಧಿವೇಶನವು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಇದನ್ನೂ ಓದಿ: ಧರ್ಮಸ್ಥಳ: (ನ.15- 19) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲ ಸೌಕರ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಬಿ.ಎಂ. ಪಾಟೀಲ್ ಸರ್ವಧರ್ಮ ಸಮ್ಮೇಳನದ 93 ನೇ ಅಧೀವೇಶನ ಉದ್ಘಾಟಿಸಲಿದ್ದಾರೆ.

ಹರಿಹರಪುರದ ಪೂಜ್ಯ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಬೆಂಗಳೂರಿನ ಪ್ರಜಾವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕರಾದ ಎಸ್.‌ ಸೂರ್ಯಪ್ರಕಾಶ್ ಪಂಡಿತ್ ಮತ್ತು ಖ್ಯಾತ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 8.30 ರಿಂದ ರಿಂದ ಚೆನ್ನೈ ನ ವಿದುಷಿ ಡಾ. ಶೀಲಾ ಉನ್ನಿಕೃಷ್ಣನ್ ನಿರ್ದೇಶನದಲ್ಲಿ ಶ್ರೀದೇವಿ ನೃತ್ಯಾಲಯದ ಕಲಾವಿದರಿಂದ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಲಿದೆ.

ರಾತ್ರಿ ಕಂಚಿಮಾರು ಕಟ್ಟೆ ಉತ್ಸವ ನಡೆಯಲಿದೆ. ನ. 19 ರಂದು ಬುಧವಾರ ಸಂಜೆ 5 ಗಂಟೆಗೆ ಸಾಹಿತ್ಯ ಸಮ್ಮೇಳನದ 93 ನೇ ಅಧಿವೇಶನವನ್ನು ಹಿರಿಯ ಸಾಹಿತಿ ಮತ್ತು ಅಂಕಣಕಾರ ಪ್ರೊ. ಪ್ರೇಮಶೇಖರ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ “ವಿಶ್ವವಾಣಿ” ಪತ್ರಿಕೆಯ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಖ್ಯಾತ ಲೇಖಕಿ ಶಾಂತಾ ನಾಗಮಂಗಲ, ವಿವೇಕಹಂಸ ಮಾಸಪತ್ರಿಕೆಯ ಸಂಪಾದಕ ಡಾ. ರಘು ವಿ. ಮತ್ತು ಧಾರವಾಡದ ಖ್ಯಾತ ಸಾಹಿತಿ ಡಾ. ಬಿ.ಎಂ. ಶರಭೇಂದ್ರ ಸ್ವಾಮಿ ಉಪನ್ಯಾಸ ನೀಡಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 8.30 ರಿಂದ ಬೆಂಗಳೂರಿನ ರಾಹುಲ್ ವೆಲ್ಲಾಲ್ ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ರಾತ್ರಿ “ದಕ್ಷಯಜ್ಞ” ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ.
ರಾತ್ರಿ 12 ಗಂಟೆ ಬಳಿಕ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ನಡೆಯಲಿದೆ.
ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಆಗಮಿಸಲಿದ್ದು, ನ. 20 ರ ಗುರುವಾರ ಬೆಳಗ್ಗಿನ ಜಾವ ಲಕ್ಷದೀಪೋತ್ಸವ ಸಮಾಪನಗೊಳ್ಳುತ್ತದೆ.
ರಾಜ್ಯದ ವಿವಿಧ ಭಾಗಗಳಿಂದ ಚೆಂಡೆ, ಕೊಂಬು, ಕಹಳೆ, ವಾಲಗ, ನಾಗಸ್ವರ ಮೊದಲಾದ ಸಾವಿರಾರು ಕಲಾವಿದರು ರಾತ್ರಿ ಇಡೀ ಕಲಾಸೇವೆ ಮಾಡಲಿದ್ದಾರೆ. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯ ಕಲ್ಪಿಸಿದೆ.

Leave a Reply

Your email address will not be published. Required fields are marked *