Wed. Nov 12th, 2025

Uppinangady: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಉಪ್ಪಿನಂಗಡಿ: 10 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಇಳಂತಿಲ ಗ್ರಾಮದ ಪಾರಡ್ಕ ಮನೆ ನಿವಾಸಿ ಹರ್ಷಿತಾ(15 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.ಹರ್ಷಿತಾ ದಿನಾಂಕ 04-11-2025 ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪಾರಡ್ಕ ಎಂಬಲ್ಲಿ ಮನೆಯಲ್ಲಿದ್ದವಳು ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡವಳನ್ನು ವಿಷಯ ತಿಳಿದು ಕೂಲಿ ಕೆಲಸಕ್ಕೆ ಹೋಗಿದ್ದ ಪಿರ್ಯಾದುದಾರರ ಪತ್ನಿ ಗೀತಾಳು ಮನೆಗೆ ಬಂದು ಒಂದು ಅಟೋ ರಿಕ್ಷಾದಲ್ಲಿ ಹರ್ಷಿತಾಳನ್ನು ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ,

ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಆಂಬ್ಯುಲೆನ್ಸ್ ನಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುತ್ತಾರೆ.ಮೃತರ ತಂದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಹರ್ಷಿತಾ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ ಸಮಯ ಮಗಳು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಹರ್ಷಿತಾಳು ದಿನಾಂಕ 12-11-2025 ರಂದು 01.00 ಗಂಟೆಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾಳೆ. ಹರ್ಷಿತಾಳಿಗೆ ಕಡಬದ ರಾಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ಇರುತ್ತದೆ.

ಅವಳ ಸಾವಿನಲ್ಲಿ ಬೇರೆ ಯಾವುದೇ ಸಂಶಯ ಅಥವಾ ಕಾರಣ ತಿಳಿದಿರುವುದಿಲ್ಲ ಎಂದು ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.ಹರ್ಷಿತಾಳ ಮೃತದೇಹ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರುತ್ತದೆ.

Leave a Reply

Your email address will not be published. Required fields are marked *