ಉಜಿರೆ: ಮಕ್ಕಳ ದಿನಾಚರಣೆಯ ಅಂಗವಾಗಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ದಿ.14/11/2025 ಭಾವಪೂರ್ಣ ಹಾಗೂ ಮನರಂಜನಾಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: 🔰ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಶಾಲೆಯ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ,ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೋ ಮುಖ್ಯ ಅತಿಥಿಗಳಾಗಿ ಪ್ರಭಾತ ಸ್ಟೋರ್ ಮಾಲಕರಾದ ಪ್ರವೀಣ್ ಭಟ್ , ಶಾಲಾ ನಾಯಕಿಯರಾದ ಸಿಂಚನ ಮತ್ತು ಮಿಷೆಲ್ ಪಿಂಟೊ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳು ಮಾತನಾಡಿ “ಮಕ್ಕಳು ನಮ್ಮ ರಾಷ್ಟ್ರದ ಭವಿಷ್ಯ.

ಅವರಲ್ಲಿ ಸೃಜನಶೀಲತೆ, ಮೌಲ್ಯಗಳು ಹಾಗೂ ಆತ್ಮವಿಶ್ವಾಸ ಬೆಳೆಸುವುದು ಶಾಲೆಯ ಹೊಣೆಗಾರಿಕೆ” ಎಂದು ಹೇಳಿದರು. ಶಾಲಾ ಸಂಚಾಲಕರು ಮಕ್ಕಳ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಿಂದ ಮಕ್ಕಳಿಗೆ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಾಗಿದ್ದು, ಇದು ಮಕ್ಕಳಲ್ಲಿ ಹೆಚ್ಚಿನ ಉತ್ಸಾಹವನ್ನು ಮೂಡಿಸಿತು.


ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕಾರ ನೀಡಿದರು.ಸಹಶಿಕ್ಷಕಿ ಶ್ರೀಮತಿ ಕೀರ್ತಿಕ ಇವರು ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ನಿಶಾ ನಿರೂಪಿಸಿ, ಸಹ ಶಿಕ್ಷಕಿ ಶ್ರೀಮತಿ ರಕ್ಷಾ ಇವರು ಧನ್ಯವಾದವನ್ನು ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.


