ಕಾಶಿಪಟ್ಣ: ಸ್ಥಳೀಯ ಉದ್ಯಮಿ ಹಾಗೂ “ಕ್ಯಾಪ್ಸಿ ಕೇಟರರ್ಸ್” ಮಾಲೀಕರಾದ ಅನಿಲ್ ಅಂಚನ್ ಅವರು ಕಾಶಿಪಟ್ಣ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸುವ ಮೂಲಕ ಉದಾರತೆ ಮೆರೆದಿದ್ದಾರೆ.

ಮಕ್ಕಳ ದಿನಾಚರಣೆಯ ಶುಭ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಾಲಾ ವಿದ್ಯಾರ್ಥಿಗಳಿಗೆ ಮಾಡಿದ ಈ ಸಹಾಯವನ್ನು ಗುರುತಿಸಿ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಶ್ರೀ ಅನಿಲ್ ಅಂಚನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ತಮ್ಮ ಸಂಸ್ಥೆಯ ಮೂಲಕ ಸದಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಅನಿಲ್ ಅಂಚನ್ ಅವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.




