ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ದಿನಾಂಕ 20 -11- 2025 ರಂದು ಶಾಲಾ ಸಂಚಾಲಕರಾದ ವಂ!ಫಾ. ಅಬೆಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ರಾಂಬೊ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಮಾಲಕರಾದ ರೆಜಿನಾಲ್ಡ್ ಸಲ್ದಾನ, ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ, ಅಂತಾರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ವಿಲೋನಾ ಡಿಕುನ್ಹಾ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಆಂಟನಿ ಫೆರ್ನಾಂಡಿಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಗುರುರಾಜ್ ಶಬರಾಯ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರೆಜಿನಾಲ್ಡ್ ಸಲ್ದಾನ ಹಾಗೂ ವಿಲೋನಾ ಡಿಕುನ್ಹಾ ಇವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾದ ರೆಜಿನಾಲ್ಡ್ ಸಲ್ದಾನ ಇವರು ಶಾಲೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾ ಶಾಲಾ ಜೀವನದಲ್ಲಿ ಆಟದ ಮಹತ್ವದ ಬಗ್ಗೆ ತಿಳಿಸಿದರು.ವಿಲೋನಾ ಡಿಕುನ್ಹಾ ಅವರು ತನ್ನ ಸಾಧನೆಗೆ ಅನುಗ್ರಹ ಶಿಕ್ಷಣ ಸಂಸ್ಥೆ ಹಾಗೂ ದೈಹಿಕ ಶಿಕ್ಷಕರ ಪ್ರೋತ್ಸಾಹದ ಕುರಿತು ಶ್ಲಾಘನೀಯ ಮಾತುಗಳಾಡಿದರು. ಶಾಲಾ ಸಂಚಾಲಕರು ಸೋಲು ಗೆಲುವುಗಳನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು. ದೈಹಿಕ ಶಿಕ್ಷಕರಾದ ವಸಂತ್ ಹೆಗಡೆ ಹಾಗೂ ನಿಶ್ಚಿತ್ ಇವರು ಕ್ರೀಡಾಕೂಟವನ್ನು ಉತ್ತಮವಾಗಿ ನಿರ್ವಹಿಸಿದರು.


ಎಲ್ಲಾ ಸಹ ಶಿಕ್ಷಕರು, ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ಸಹ ಶಿಕ್ಷಕ ಶ್ರೀ ರವಿಕುಮಾರ್ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ವಿನಯ ಲತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಎಲ್ಲರನ್ನೂ ಅಭಿನಂದಿಸಲಾಯಿತು.


