ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.

ಇದನ್ನೂ ಓದಿ : 🛑ಪುತ್ತೂರು: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ಧಾಂತ, ಸಾಮಾಜಿಕ ನ್ಯಾಯ, ಜಾತ್ಯಾತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು ಪ್ರವೀಣ್ ಫೆರ್ನಾಂಡಿಸ್.
ಪ್ರವೀಣ್ ಫೆರ್ನಾಂಡಿಸ್ ರವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.





