Sat. Nov 22nd, 2025

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

ಉಜಿರೆ: (ನ. 22) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ(ರಿ) ಉಜಿರೆ ಇದರ ಸಹಯೋಗದೊಂದಿಗೆ, ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಉಜಿರೆ, ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆ ಉಜಿರೆ ಹಾಗೂ ಶ್ರೀ ಧ. ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಣದಲ್ಲಿ ವಾರ್ಷಿಕ ಕ್ರೀಡಾ ಕೂಟ ನಡೆಯಿತು.

ಇದನ್ನೂ ಓದಿ: 💐💐ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್‌ ನೇಮಕ

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಮಾಲಾಡಿ ಸ. ಹಿ. ಪ್ರಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಜಯರಾಜ್ ಜೈನ್ ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ಧನ್ಯಕುಮಾರ್ ಹಾಗೂ ಉಜಿರೆ ಎಸ್.ಡಿ.ಎಮ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಕಾರ್ಯದರ್ಶಿಯವರಾದ ಶ್ರೀ ರಮೇಶ್.ಎಚ್ ಇವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲರಾದ ಶ್ರೀ ಮನಮೋಹನ್ ನಾಯಕ್ ಕೆ.ಜಿ, ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಮುಖ್ಯೋಪಾಧ್ಯಾರಾದ ಶ್ರೀಮತಿ ವಿದ್ಯಾಲಕ್ಷ್ಮೀ, ಶ್ರೀ. ಧ. ಮಂ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾರಾದ ಶ್ರೀಮತಿ ವಿದ್ಯಾ. ಟಿ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎಸ್.ಡಿ.ಎಮ್ ಬಿ.ವೈ.ಎನ್.ಎಸ್ ಕಾಲೇಜಿನ ಪಿ.ಟಿ ಶ್ರೀ ಧರ್ಮೇಂದ್ರ ಇವರು ನಿರೂಪಿಸಿದರು.

Leave a Reply

Your email address will not be published. Required fields are marked *