Tue. Nov 25th, 2025

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇ.ಗ್ರಾ.ಯೋ. ಬಿ.ಸಿ. ಟ್ರಸ್ಟ್(ರಿ.) ವತಿಯಿಂದ ಸಿಯೋನ್ ಆಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಪರಮಪೂಜ್ಯ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಅಂಗವಾಗಿ ಸಿಯೋನ್ ಆಶ್ರಮಕ್ಕೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ವತಿಯಿಂದ ಆಹಾರ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಹುಟ್ಟುಹಬ್ಬದ ಕೇಕ್ ಕತ್ತರಿಸಿ, ಆಶ್ರಮನಿವಾಸಿಗಳಿಗೆ ಸಿಹಿ ಹಂಚಲಾಯಿತು.

ಇದನ್ನೂ ಓದಿ: 🟣ಧರ್ಮಸ್ಥಳ: ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬ


ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಯೋಜನಾಧಿಕಾರಿ ಶ್ರೀಯುತ ಸುರೇಶ್ ರವರು ಮಾತನಾಡಿ, ಪೂಜ್ಯ ಹೆಗ್ಗಡೆಯವರ ಮಾನವಸೇವೆ ಮತ್ತು ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಸ್ಪೂರ್ತಿದಾಯಕವೆಂದು ಹೇಳಿದರು. ಸಿಯೋನ್ ಆಶ್ರಮದೊಂದಿಗೆ ಇರುವ ಬಾಂಧವ್ಯವನ್ನು ಸ್ಮರಿಸಿಕೊಂಡ ಅವರು, ಆಶ್ರಮದ ಸೇವಾ ಚಟುವಟಿಕೆಗಳನ್ನು ಪ್ರಶಂಸಿಸಿದರು.
ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ. ಯು.ಸಿ. ಪೌಲೋಸ್ ರವರು ಪೂಜ್ಯರ ಸೇವಾಧರ್ಮ ಮತ್ತು ಸಮಾಜೋದ್ಧಾರದ ಕಾರ್ಯವೈಖರಿಯನ್ನು ಸಂಕ್ಷಿಪ್ತವಾಗಿ ವಿವರಿಸಿ, ಶ್ರೀ ಕ್ಷೇತ್ರದಿಂದ ದೊರೆಯುತ್ತಿರುವ ಸಹಕಾರವು ಆಶ್ರಮದ ಸೇವಾ ಕಾರ್ಯಗಳಿಗೆ ಬಲವರ್ಧಕವಾಗಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಯೋಜನಾಧಿಕಾರಿ ಶ್ರೀಯುತ ಮಂಜುನಾಥ, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಶ್ರೀಯುತ ಯಶೋಧರ, ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿ ಶ್ರೀಮತಿ ಅಮೃತ, ಜನಜಾಗೃತಿ ಮಾಜಿ ಅಧ್ಯಕ್ಷರಾದ ಶ್ರೀಯುತ ಡಿ.ರಹಿಮಾನ್, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಶ್ರಿಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಮುಂಡಾಜೆ ವಲಯ ಮೇಲ್ವಿಚಾರಕರಾದ ಶ್ರೀಯುತ ಗಣೇಶ್, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಸಿಯೋನ್ ಆಶ್ರಮದ ಸಿಬ್ಬಂದಿಗಳು, ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಸಿಯೋನ್ ಸಿಬ್ಬಂದಿ ಶ್ರೀಮತಿ ದಿನಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು