Tue. Nov 25th, 2025

Belthangady: “ಡಿಕೆಶಿ ಸಿಎಂ ಆಗಲಿ” – ಕೇರಳದ ಪ್ರಸಿದ್ಧ ಮಡಾಯಿ ಕಾವು ದೇವಸ್ಥಾನದಲ್ಲಿ ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಜ್ವಲ್ ಜೈನ್ ರವರಿಂದ ವಿಶೇಷ ಪೂಜೆ

ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಬಹುಮತ ಗಳಿಸಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿರುವ ಪೈಪೋಟಿ ಕುತೂಹಲ ಕೆರಳಿಸಿದೆ. ಈ ನಡುವೆ, ಬೆಳ್ತಂಗಡಿ ಯುವ ಕಾಂಗ್ರೆಸ್ ನಾಯಕರೊಬ್ಬರು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದು ದೇವರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ⭕ಪುತ್ತೂರು: ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆ

ಬೆಳ್ತಂಗಡಿ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷರಾದ ಪ್ರಜ್ವಲ್ ಜೈನ್ ನಾವರ ಅವರು ಕೇರಳದ ಇತಿಹಾಸ ಪ್ರಸಿದ್ಧ ಮತ್ತು ಅತ್ಯಂತ ಶಕ್ತಿಶಾಲಿ ದೇವಸ್ಥಾನವಾದ ಮಡಾಯಿ ಕಾವು ತಿರುವರ್ಕಾಡು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಅವರು ಡಿ.ಕೆ. ಶಿವಕುಮಾರ್‌ ಅವರ ಹೆಸರಿನಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಸಲ್ಲಿಸಿದರು. ಡಿ.ಕೆ.ಶಿ. ಅವರು ಯಾವುದೇ ವಿಘ್ನವಿಲ್ಲದೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಭಗವತಿ ದೇವಿಗೆ ಭಕ್ತಿಯಿಂದ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು