Wed. Nov 26th, 2025

ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ.ಕಾಲೇಜಿನಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವು ನವೆಂಬರ್ 25 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಇದನ್ನೂ ಓದಿ: 🔵ಬಂಟ್ವಾಳ: ಪೂಜ್ಯರ ಜನ್ಮದಿನದ ಪ್ರಯುಕ್ತ ಪೆರ್ನೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ವೃಂದದಿಂದ ದೇವರಿಗೆ ರಂಗಪೂಜೆ ಸೇವೆ

ಈ ಸಮಾರಂಭದಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 95 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿಯನ್ನು ನೀಡಲಾಗಿದ್ದು, ಮತ್ತು ಪ್ರಥಮ ಪಿಯುಸಿ ಪ್ರವೇಶ ಪಡೆದ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ ಪಡೆದ ಒಟ್ಟು 129 ವಿದ್ಯಾರ್ಥಿಗಳಿಗೆ ಸುಮಾರು ಮೂವತ್ತು ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು

ಈ ಸಂದರ್ಭದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಹಂಸಿನಿ ಭಿಡೆ, ನಾ ಕಂಡಂತೆ ಪೂಜ್ಯರು ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಬೆಂಗಳೂರಿನ ಕ್ಷೇಮವನದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರದ್ಧಾ ಅಮಿತ್, ಎಸ್ ಡಿ ಎಂ ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ವಿನಯವೂ ಇರುವುದು ವಿಶೇಷ. ವ್ಯಕ್ತಿ ಬೆಳೆಯಲು ಸೃಜನ ಶೀಲತೆ, ಆರೋಗ್ಯ, ಮತ್ತು ಧನದ ಅವಶ್ಯಕತೆ ಇದ್ದು, ಇದಕ್ಕೆ ಬೇಕಾದ ಪೂರಕ ವಾತಾವರಣ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳಲ್ಲಿ ದೊರಕುತ್ತಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಗೊಳಿಸಬೇಕು ಎಂದು ಕಿವಿ ಮಾತು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಖ್ಯಾತ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಮಾತನಾಡಿ, ನಹಿ ಜ್ಞಾನೇನ ಸದೃಶಂ, ಸದಾ ಕಾಲ ಶಾಶ್ವತವಾಗಿ ಉಳಿಯುತ್ತದೆ, ಮನುಷ್ಯನ ಜೀವನದವು ಧನಾತ್ಮಕ ಹಾಗೂ ಋಣಾತ್ಮಕ ಧಾತುಗಳ ಮೇಲೆ ನಿಂತಿದೆ. ಕೀಳರಿಮೆಯ ಪ್ರಜ್ಞೆ ಯಿಂದ ಹೊರ ಬರಲು ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ವಯೋ ಸಹಜ ಮಾನಸಿಕ ಒತ್ತಡಕ್ಕೆ ಒಳಗಾಗಿ ವಿದ್ಯಾರ್ಥಿ ಜೀವನದಲ್ಲಿ ಸಮಸ್ಯೆ ಕಾಣುತ್ತಾನೆ. ಧನಾತ್ಮಕ ಚಿಂತನೆಗಳನ್ನು ನಿರಾಕರಿಸಬಾರದು. ಸಕಾರಣ ಚಿಂತನೆಗಳು ವ್ಯಕ್ತಿತ್ವ ರೂಪಿಸುತ್ತವೆ. ಮೆಚ್ಚುಗೆ ಅಥವಾ ತೆಗಳಿಕೆ
ಅಂಕಗಳು ಜೀವನಕ್ಕೆ ಮಾನದಂಡ ಅಲ್ಲ. ಜೀವನದ ಪರೀಕ್ಷೆಗೆ ಪೋಷಕರ ಸಂದೇಶಗಳು ಪ್ರಮುಖ ಪಾತ್ರ ವಹಿಸುತ್ತದೆ. ಪೋಷಕರ ಪ್ರೋತ್ಸಾಹ ಹಾಗೂ ಸತತ ಮಾರ್ಗದರ್ಶನ ಜೀವನದಲ್ಲಿ ಯಶಸ್ಸು ಗಳಿಸಲು ಸಹಾಯ ಮಾಡುತ್ತದೆ. ಹೋಲಿಕೆಯ ಬದುಕು ಸಲ್ಲ. ಅಭಿರುಚಿಗಳು ಭಿನ್ನ ಪೂರಕ ಸಂವಾದಗಳು ಜೀವನಕ್ಕೆ ಅಗತ್ಯ. ಸಹವಾಸ ದೋಷಗಳು ವಿದ್ಯಾರ್ಥಿ ಜೀವನವನ್ನು ಹಾಳು ಮಾಡುತ್ತವೆ. ಪತನಕ್ಕೆ ಒಂದು ಕ್ಷಣ ಸಾಕು, ಉದ್ಧಾರಕ್ಕೆ ಯುಗ ಯುಗಗಳು ಬೇಕಾಗುತ್ತವೆ. ಎಂದು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಪೂಜ್ಯರ ಆಶಯದಂತೆ ಪ್ರತೀ ವಿದ್ಯಾರ್ಥಿಯು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಂಸ್ಕಾರಯುತ ಜೀವನ ನಡಿಸಿ. ಸಾಮರ್ಥ್ಯದ ಮೂಲಕ ಸಂಪಾದಿಸಿದ ವಿದ್ಯೆ ಜೀವನಕ್ಕೆ ಪ್ರೇರಣೆಯಾಗಲಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಜೋಯಕ ಪ್ರೊ .ಎಸ್. ಎನ್ ಕಾಕತ್ಕರ್, ಉಪಸ್ಥಿತರಿದ್ದರು.

ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ಸ್ವಾಗತಿಸಿ, ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕ ಡಾ. ಮಹಾವೀರ ಜೈನ್ ಮತ್ತು ಆಂಗ್ಲ ಭಾಷಾ ಉಪನ್ಯಾಸಕಿ ನಿಹಾರಿಕಾ ಜಿ. ಎನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು