Wed. Nov 26th, 2025

Belthangady: ರಾಷ್ಟ್ರಪತಿ ದ್ರೌಪದಿಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.

ಇದನ್ನೂ ಓದಿ: 🟣ಬೆಳ್ತಂಗಡಿ : ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ


ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.


ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.


ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.
ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.

Leave a Reply

Your email address will not be published. Required fields are marked *