ಉಜಿರೆ: ದ.ಕ. ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ , ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ , ಮಂಗಳೂರು ಸಂಸ್ಕೃತ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ರಾಮಕೃಷ್ಣ ಪ.ಪೂ ಕಾಲೇಜಿನಲ್ಲಿ ನಡೆದ

ಇದನ್ನೂ ಓದಿ: 🔵ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಲ್. ಐ.ಸಿ ಯಿಂದ ಕೊಡುಗೆ ಹಸ್ತಾಂತರ
ಜಿಲ್ಲಾ ಮಟ್ಟದ ಶ್ರೀ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯಶಾಸ್ತ್ರದ ಹಂಸಿನಿ ಭಿಡೆ ಇವರು ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಹಾಗೆಯೇ ದ್ವಿತೀಯ ಕಲಾ ವಿದ್ಯಾರ್ಥಿನಿ ನಿಜ ಕುಲಾಲ್ ತೃತೀಯ ಬಹುಮಾನ ಪಡೆದರು.
ಬಹುಮಾನಿತರನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ಅಭಿನಂದಿಸಿದ್ದಾರೆ.





