ಸುಳ್ಯ: ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸೀಮಾಧಿಪತಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸರ್ವ ಸೇವೆ ಹಾಗೂ ಶಿವಶಂಕರಿ ಮಹಿಳಾ ಭಜನಾ ಸಂಘ ಹಾಗೂ ಶ್ರೀಮಲ್ಲಿಕಾರ್ಜುನ ಭಜನಾ ಸಂಘದವರಿಂದ ಭಜನಾ ಸೇವೆ ಹಾಗೂ ಶ್ರೀದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಭಜನಾ ಸಂಘಗಳ ಪದಾಧಿಕಾರಿಗಳು, ವಲಯ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿಯವರು, ತೊಡಿಕಾನ ಶಾಲಾ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ತೊಡಿಕಾನ ಅಂಚೆ ಪಾಲಕರು, ವಿ.ಎಲ್.ಇ ಹಾಗೂ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.





