Wed. Dec 3rd, 2025

Belthangady: ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ – ಹರೀಶ್ ಪೂಂಜ

ಬೆಳ್ತಂಗಡಿ(ಡಿ.3): 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ

ಇದನ್ನೂ ಓದಿ: 🟣ಗುರುವಾಯನಕೆರೆ: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ

ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು , ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು ನೀರಿನ ಸೆಳೆತಕ್ಕೆ ಕೊಚ್ಚಿ/ಕುಸಿತಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಆ ಭಾಗದಲ್ಲಿ ಅಗತ್ಯವಾಗಿ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಲು

ಹಾಗೂ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಶಾಸಕರು ದಿ‌:31.07.2025ರಂದು ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿಯನ್ನು ನೀಡಿದ್ದು ಸದ್ರಿ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿರುತ್ತದೆ. ಈ ಸಂದರ್ಭದಲ್ಲಿ ಅನುದಾನವನ್ನು ಮಂಜೂರುಗೊಳಿಸಿದ ರಾಜ್ಯ ಸರಕಾರಕ್ಕೆ ಶಾಸಕರಾದ ಹರೀಶ್ ಪೂಂಜರವರು ತಾಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *