ಪುತ್ತೂರು: ಅಸೌಖ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲುವಿನಲ್ಲಿ ನಡೆದಿದೆ.

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯಕ್ಕೆ ಒಳಗಾಗಿ ಡಿ.4 ರಂದು ಸ್ವಗೃಹದಲ್ಲೇ ಮೃತಪಟ್ಟಿದ್ದಾರೆ.
ಚೈತನ್ಯ ಪುತ್ತೂರಿನಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಅಧ್ಯಯನ ಮಾಡುತ್ತಿದ್ದರು. ಹಠಾತ್ ಆರೋಗ್ಯದಲ್ಲಿ ಏರುಪೇರಾಗಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.





