Thu. Dec 4th, 2025

Ujire: ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಶೇ.100 ಫಲಿತಾಂಶ

ಉಜಿರೆ: (ಡಿ.4) ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.21 ರಂದು ಬೆಳ್ತಂಗಡಿ ಸ್ಥಳೀಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ವತಿಯಿಂದ

ಇದನ್ನೂ ಓದಿ: 🔵ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು

ಬೆಳ್ತಂಗಡಿ ತಾಲೂಕಿನ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ ಶಾಲೆಯ ಕಬ್, ಬುಲ್ಬುಲ್ ವಿದ್ಯಾರ್ಥಿಗಳಿಗೆ ಶೇ.100 ಫಲಿತಾಂಶ ಲಭಿಸಿದೆ.

ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ ಅಭಿನಂದಿಸಿ ಪ್ರಮಾಣಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *