ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕೀಟನಾಶಕ ಸೇವಿಸಿ ಅಪ್ರಾಪ್ತ ಬಾಲಕಿಯು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆತ್ಮಹತ್ಯೆಗೆ ಶರಣಾದ ಬಾಲಕಿ ತಾಯಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದಿನಾಂಕ 4.11.2025 ರಂದು ಬಾಲಕಿ ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದಿನಾಂಕ: 12-11- 2025 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು



ಇನ್ನು ಮೃತ ಬಾಲಕಿಯನ್ನು ಓರ್ವ ಆರೋಪಿಯು ಲೈಂಗಿಕವಾಗಿ ಬಳಸಿಕೊಂಡಿದ್ದು, ಮತ್ತೋರ್ವ ಆರೋಪಿಯೊಂದಿಗೆ ಸೇರಿ ಬಾಲಕಿಗೆ ಕಿರುಕುಳ ನೀಡಿ, ಬೆದರಿಸಿರುವುದರಿಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ, ಮೃತ ಬಾಲಕಿಯ ತಾಯಿ ದಿನಾಂಕ : 28-11-2025 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಫೋಕ್ಸೋ ಕಾಯ್ದೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ, ಪ್ರಕರಣದ ಇಬ್ಬರು ಆರೋಪಿಗಳ ಪೈಕಿ ಪ್ರಮುಖ ಆರೋಪಿಯು ಅಪ್ರಾಪ್ತನೆಂದು ಕಂಡುಬಂದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.


