Thu. Dec 4th, 2025

Venur: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಕಾಲೇಜು ನಿಟ್ಟಡೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ ಹೆಚ್
ರವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಮೋಘ ಸಾಧನೆಗಾಗಿ ಶಿಕ್ಷಣ ಸಿಂಧೂರ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: 🟣ವೇಣೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕುಂಭಶ್ರೀ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ


ಹಳ್ಳಿ ಪ್ರದೇಶದಲ್ಲಿ ಬಡ ವಿದ್ಯಾರ್ಥಿಗಳಿಗೆ ಉತ್ತಮ ಗುಣ ಮಟ್ಟದ ವಿದ್ಯಾಭ್ಯಾಸವನ್ನು ಪಡೆಯುವ ಉದ್ದೇಶಕ್ಕಾಗಿ 1996 ರಲ್ಲಿ
ಪ್ರಾರಂಭಗೊಂಡ ವಿದ್ಯಾಸಂಸ್ಥೆಯು ಉತ್ತಮ ಮಟ್ಟದ ವಿದ್ಯಾಭ್ಯಾಸವನ್ನು ನೀಡುತ್ತಿದೆ.

ಶಿಕ್ಷಣಕ್ಕೆ ಮಾತ್ರ ಪ್ರಶಸ್ತಿಯನ್ನು ನೀಡುವುದಲ್ಲದೆ ಸಂಗೀತ, ಭರತನಾಟ್ಯ, ಕರಾಟೆ ,ಯೋಗ, ಡ್ಯಾನ್ಸ್ ತರಗತಿಗಳು ನುರಿತ ತರಬೇತುದಾರದಿಂದ ನಡೆಯುತ್ತದೆ.
ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಉತ್ತಮ ಮಟ್ಟದ ಶಿಕ್ಷಣ ನೀಡಲಾಗುತಿದ್ದು,ಶೈಕ್ಷಣಿಕ ಸಾಧನೆಗೆ ಸ್ಟಾರ್ ಆಫ್ ಏಷ್ಯಾ
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ,ಪ್ರಭುದ್ಧ ಭಾರತ ಶಿಕ್ಷಣ ಬೀಷ್ಮ ಹಲವಾರು ಪ್ರಶಸ್ತಿಗಳನ್ನು ತನ್ನ
ಮುಡಿಗೇರಿಸಿಕೊಂಡಿದೆ . ಈ ಎಲ್ಲಾ ಸಾಧನೆಯನ್ನು ಗುರುತಿಸಿ,

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ
ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು ಸಯೋಗದಲ್ಲಿ 2026 ರ ಜನವರಿ
4 ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ ವೇದಿಕೆಯಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ
ಸೇವಾಂಜಲಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ನಡೆಯಲಿದೆ .ಇದು ಶಾಲಾ ಆಡಳಿತ ಮಂಡಳಿಗೆ ತುಂಬಾ ಹೆಮ್ಮೆಯ
ವಿಷಯವಾಗಿದೆ.

Leave a Reply

Your email address will not be published. Required fields are marked *