ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಆಡಳಿತವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಿನಾಂಕ: 08 ಡಿಸೆಂಬರ್ 2025, ಸೋಮವಾರ ದಂದು ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ‘ಜನರ ಬಳಿಗೆ-ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ⭕ಇಂಡಿಗೋ ವಿಮಾನ ವ್ಯತ್ಯಯ ಎಫೆಕ್ಟ್
ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಅರಿತು, ಅವುಗಳಿಗೆ ಕೂಡಲೇ ಪರಿಹಾರ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕ ಹರೀಶ್ ಪೂಂಜ ಅವರು ಸ್ವತಃ ಎಲ್ಲಾ ಅಧಿಕಾರಿಗಳೊಂದಿಗೆ ವಿವಿಧ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಲಿದ್ದಾರೆ.


ಸೋಮವಾರದಂದು ನಡೆಯುವ ಜನಸ್ಪಂದನಾ ಸಭೆಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ:
1.ಪೂರ್ವಾಹ್ನ 9:30: ಗ್ರಾಮ ಪಂಚಾಯತ್ ಇಂದಬೆಟ್ಟು
2.ಪೂರ್ವಾಹ್ನ 11:00: ಗ್ರಾಮ ಪಂಚಾಯತ್ ನಡ
3.ಅಪರಾಹ್ನ 2:00: ಗ್ರಾಮ ಪಂಚಾಯತ್ ಉಜಿರೆ
4.ಸಂಜೆ 4:00: ಗ್ರಾಮ ಪಂಚಾಯತ್ ಬೆಳಾಲು

ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಈ ಜನಸ್ಪಂದನಾ ಕಾರ್ಯಕ್ರಮದ ಸಂಪೂರ್ಣ ಸದುಪಯೋಗ ಪಡೆದುಕೊಂಡು ತಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕೆಂದು ವಿನಂತಿಸಲಾಗಿದೆ.


