ಬೆಳ್ತಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದು ಮದುವೆಯಾಗುವಂತೆ ಕಿರುಕುಳ ನೀಡಿದ ಆರೋಪದಡಿ ಜ್ಯೋತಿಷಿ ವಿರುದ್ಧ ಯುವತಿ ದೂರು ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ.

ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಶೇಷಗಿರಿ ಭಟ್ ಆರೋಪಿ ಜ್ಯೋತಿಷಿ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.

ತೆಕ್ಕಾರಿನ ಯುವತಿಯೊಬ್ಬಳ ಜಾತಕ ಪರಿಶೀಲಿಸಲು ಆಕೆಯ ಮನೆಯವರು ಶೇಷಗಿರಿ ಭಟ್ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವಿಚಾರವಾಗಿ ಬಳಿಕ ಯುವತಿಯ ಮನೆಯವರನ್ನು ಸಂಪರ್ಕಿಸಿದ ಶೇಷಗಿರಿ ಭಟ್, ಆಕೆಯ ದೋಷ ಪರಿಹಾರಕ್ಕಾಗಿ ಕೆಲವೊಂದು ಪೂಜೆ ಮಾಡಬೇಕಿದೆ ಎಂದು ಹೇಳಿದ್ದ. ಇದಾದ ಬಳಿಕ ಆತ ಯುವತಿಯನ್ನು ತನಗೆ ಮದುವೆ ಮಾಡಿಕೊಡುವಂತೆ ಮನೆಯವರಲ್ಲಿ ಒತ್ತಾಯಿಸಿದ್ದ. ಆದರೆ ಮನೆಯವರು ಹಾಗೂ ಯುವತಿ ಇದನ್ನು ನಿರಾಕರಿಸಿದ್ದಾರೆನ್ನಲಾಗಿದೆ.




