ಧರ್ಮಸ್ಥಳ: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯ ಪ್ರಯುಕ್ತ ಪೋಷಕರ ಸಭೆಯು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಇದನ್ನೂ ಓದಿ: ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ – 2025 ವಾರ್ಷಿಕ ಕ್ರೀಡಾಕೂಟ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕರಾದ ಚಂದ್ರಶೇಖರ್ ಇವರು ವಹಿಸಿ ಸರಕಾರದಿಂದ ವಿದ್ಯಾರ್ಥಿಗಳಿಗೆ ದೊರೆಯುವ ಸವಲತ್ತುಗಳನ್ನು ಪಡೆಯುವುದು ಹಾಗೂ ಇದು ಸರಿಯಾದ ರೀತಿಯಲ್ಲಿ ಮಕ್ಕಳಿಗೆ ಲಭಿಸುತ್ತದೆಯೇ ಎಂಬುದನ್ನು ಪೋಷಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ವ್ಯವಸ್ಥಾಪಕರಾದ ಶ್ರೀ ರಾಜೀವ ಸಾಲಿಯಾನ್ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಪೋಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.


ವೇದಿಕೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ ರಾಜೇಶ್, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ಶೀ ರಾಜೇಂದ್ರ, ಶಾಲಾ ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್, ಪ್ರಾಥಮಿಕ ಆರೋಗ್ಯ ಇಲಾಖಾ ಹಿರಿಯ ಅಧಿಕಾರಿ
ಶ್ರೀಮತಿ ವಿಜಯಲಕ್ಷ್ಮೀ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಸಂತಿ, ಅಡುಗೆ ಸಿಬ್ಬಂದಿ ಶ್ರೀಮತಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.
ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಶಿಕ್ಷಕ ಶ್ರೀ ಜೋಸೆಫ್ ಸ್ವಾಗತಿಸಿ ಶಿಕ್ಷಕಿ ಶ್ರೀಮತಿ ನಿಖಿಲಾ ವಂದಿಸಿದರು. ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರ್ವಹಿಸಿದರು.


