Mon. Dec 22nd, 2025

ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗಣಿತ ಲೋಕದ ಪಿತಾಮಹ ಶ್ರೀನಿವಾಸ್ ರಾಮಾನುಜನ್ ಇವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಗಣಿತ ದಿನಾಚರಣೆ ಹಾಗೂ ಗಣಿತ ವಸ್ತು ಪ್ರದರ್ಶನದ ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು.

ಇದನ್ನೂ ಓದಿ: 🔷ಉಜಿರೆ: ಎಸ್.ಡಿ.ಎಂ ಸಿಬಿಎಸ್ಇ ಶಾಲೆ ಉಜಿರೆ “ಕಲಾಬ್ಧಿ – 2025” ಗೆ ಚಾಲನೆ

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಶ್ರೀಯುತ ಸಯ್ಯದ್ ಅಯ್ಯುಬ್ ನೆರವೇರಿಸಿ ಮಾತನಾಡಿ “ಜೀವನದಲ್ಲಿ ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧ್ಯ ಹಾಗೂ ರಾಮಾನುಜನ್ ಅವರು ಅಲ್ಪ ಆಯುಷ್ಯದಲ್ಲಿ ಮಾಡಿದ ಸಾಧನೆ ನಮಗೆ ಪ್ರೇರಣೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಮಾತನಾಡಿ “ವಿದ್ಯಾರ್ಥಿಗಳು ರಾಮಾನುಜನ್ ಅವರ ಜೀವನದ ಸಾಧನೆಯನ್ನು ತಿಳಿದುಕೊಳ್ಳಬೇಕು.ಜೀವನದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ರಾಮಾನುಜರಂತೆ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಗಣಿತ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಗಣಿತ ಪ್ರಾತ್ಯಕ್ಷಿಕೆಗಳು ಅತಿಥಿಗಳ ಪ್ರಶಂಸೆಗೆ ಪಾತ್ರವಾಯಿತು. ಶಾಲಾ ವಿದ್ಯಾರ್ಥಿಗಳು ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 9ನೇ ತರಗತಿಯ ವಿದ್ಯಾರ್ಥಿ ಕುಮಾರಿ ಹಿಫ್ಝ ಬೇಗಂ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *