ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (CBSE) ಶಾಲೆಯ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಲಾಬ್ದಿ – 2025 ಎರಡನೇ ದಿನದ ಪ್ರತಿಭಾ ಕಲರವ ನಡೆಯಿತು.

ಎರಡನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬಣ್ಣ ಬಣ್ಣದ ಉಡುಗೆ ತೊಡುಗೆಗಳ ಜೊತೆಗೆ ವಿನೂತನವಾದ ಭರತನಾಟ್ಯ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನೀಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ವಾರ್ಷಿಕ ಮ್ಯಾಗಝಿನ್ ‘ ವಿಷನ್ 2025-26 ಪುಸ್ತಕವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ, ಧರ್ಮಸ್ಥಳದ ಡಾ. ಹೇಮಾವತಿ ವಿ ಹೆಗ್ಗಡೆ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳನ್ನು ಗೌರವಿಸಿ, ಶುಭ ಹಾರೈಸಿದರು. ಈ ವೇಳೆ ಸೋನಿಯಾ ಯಶೋವರ್ಮ, ಮುಖ್ಯ ಶಿಕ್ಷಕ ಮನಮೋಹನ್ ನಾಯ್ಕ್ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಪ್ರತಿಭಾ ಸಮಾರಂಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಶಶಿಶೇಖರ್ ಕಾಕತ್ಕಾರ್ ಸೇರಿದಂತೆ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು, ಶಿಕ್ಷರು , ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದರು. ಸಮಾರಂಭವನ್ನು ಶಾಲೆಯ ಆಂಗ್ಲ ಭಾಷಾ ಅಧ್ಯಾಪಕಿ ನೀತು ಪ್ರಸಾದ್ ಮತ್ತು ಶಾಂತಿ ಜಾರ್ಜ್ ನಿರೂಪಿಸಿ, ವಂದಿಸಿದರು.


