ಹಾಸನ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಎಸ್ಎಸ್ಎಲ್ಸಿ (10ನೇ ತರಗತಿ) ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ನಿಧನ
ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಘಟನೆಯು ಹಾಸನದ ಚನ್ನರಾಯಪಟ್ಟಣದ ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಿತ್ಯ ಶಾಲೆಗೆ ವ್ಯಾನ್ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ವ್ಯಾನ್ ಚಾಲಕ ರಂಜನ್ ಪರಿಚಯವಾಗಿದ್ದಾನೆ. ಹೀಗೆ ಪರಿಚಯನಾದ ರಂಜನ್, ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಪರಿಣಾಮ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ.

ರಂಜನ್ ಚನ್ನರಾಯಪಟ್ಟಣದ ಬರಗೂರು ನಿವಾಸಿಯಾಗಿದ್ದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ. ಬಾಲಕಿ ಪೋಷಕರು ನುಗ್ಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದು, ರಂಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.



