ಉಜಿರೆ: (ಡಿ.27) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳು ಮತ್ತು ಆಲೋಚನೆಗಳನ್ನು ಪ್ರದರ್ಶಿಸುವ ಹಾಗೂ ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ, ನಾವೀನ್ಯತೆಯನ್ನು ಬೆಳೆಸುವ ಗುರಿಯೊಂದಿಗೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ವಿಭಾಗದಿಂದ “ಎ.ಟಿ.ಎಲ್ ಫೆಸ್ಟ್ 2025” ಆಯೋಜಿಸಲಾಗಿತ್ತು. ಶಾಲಾ ವಿದ್ಯಾರ್ಥಿಗಳು ವಿವಿಧ ಕಾರ್ಯ ಯೋಜನೆಗಳನ್ನು ತಾವೇ ತಯಾರಿಸಿ ಪ್ರದರ್ಶನ ಏರ್ಪಡಿಸಿದ್ದರು.

ಉಜಿರೆ ಎಸ್.ಡಿ.ಎಮ್ ತಂತ್ರಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹಾಗೂ ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶ್ರೀ ಅಮರೇಶ ಹೆಬ್ಬಾರ್.ಎ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳ ಕಾರ್ಯ ಯೋಜನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಶುಭಹಾರೈಸಿದರು.

ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶ್ರೀ ಶಿವರಾಜ್ ಹಾಗೂ ಚಿತ್ರದುರ್ಗ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಶ್ರೀ ಸುನಿಲ್ ಪಿ.ಜೆ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿ ತೀರ್ಪು ನೀಡಿದರು.
ಶಾಲಾ ಪ್ರಾಂಶುಪಾಲ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.


