Sat. Dec 27th, 2025

Bengaluru: ನವವಿವಾಹಿತೆ ಸೂಸೈಡ್ ಕೇಸ್​ಗೆ ಬಿಗ್ ಟ್ವಿಸ್ಟ್

ಬೆಂಗಳೂರು : ಬೆಂಗಳೂರು ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಇದನ್ನೂ ಓದಿ: 🔷ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ ನಲ್ಲಿ ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ

ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ ಜೊತೆ ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವುದು ಈ ಪ್ರಕರಣಕ್ಕೆ ಹೊಸ ತಿರುವು ತಂದಿದೆ.

ಗಂಡನೊಂದಿಗೆ ಮನಸ್ತಾಪ ಮಾಡಿಕೊಂಡು ಪಾಲಕರ ಮನೆಗೆ ಮರಳಿದ್ದ ಗಾನವಿ, ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬ್ರೈನ್ ಡೆಡ್ ಆಗಿದ್ದ ಕಾರಣ ಕೊನೆಯುಸಿರೆಳೆದಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಸೂರಜ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಗಾನವಿಯ ಸಾವಿನ ಬಳಿಕ ಸೂರಜ್ ತಾಯಿ ಜಯಂತಿ ಹಾಗೂ ಸಹೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ಪತ್ನಿಯ ಆತ್ಮಹತ್ಯೆಯ ವಿಚಾರದಲ್ಲಿ ಆಕೆಯ ಪೋಷಕರು ಹಾಗೂ ಸಂಬಂಧಿಕರ ಆಕ್ರೋಶ ಮತ್ತು ಅವರಿಂದಾದ ಅವಮಾನ ತಡೆಯಲಾಗದೆ ತಾಯಿ- ಮಗ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸೂರಜ್ ಮತ್ತು ಗಾನವಿ ಹನಿಮೂನ್‌ಗೆ ಶ್ರೀಲಂಕಾಗೆ ತೆರಳಿದ್ದರು. ಆದರೆ ಅಲ್ಲಿ ದಂಪತಿ ನಡುವೆ ಕಲಹಗಳು ಏರ್ಪಟ್ಟಿತ್ತು. ಜೊತೆಗೆ ಗಾನವಿಯ ವಿವಾಹಪೂರ್ವ ಸಂಬಂಧದ ವಿಚಾರದಿಂದ ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಎಲ್ಲಾ ಕಾರಣದಿಂದ ಹನಿಮೂನ್ ಮಧ್ಯದಲ್ಲೇ ಮೊಟಕುಗೊಳಿಸಿ ಗಾನವಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಶ್ರೀಲಂಕಾದಿಂದ ವಾಪಸ್ ಆದ ಬಳಿಕ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *