Tue. Dec 30th, 2025

ಬೆಳಾಲು: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

ಬೆಳಾಲು: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ಡಿ. .29 ರಂದು ‘ವಿಶ್ವ ಮಾನವ ದಿನಾಚರಣೆ’ ಆಚರಿಸಲಾಯಿತು.

ಇದನ್ನೂ ಓದಿ: ಬೆಳ್ತಂಗಡಿ: ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ವಿಶ್ವಮಾನವರಾಗುವತ್ತ ನಮ್ಮ ಪಯಣ ಸಾಗಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ತಿಳಿಸಿದರು.

ವಿದ್ಯಾರ್ಥಿನಿ ಆಯಿಷತ್ ಸಂಶಿಯ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಕುವೆಂಪುರವರ ಗೀತೆಗಳ ಗಾಯನ ಕಾರ್ಯಕ್ರಮ ಜರಗಿತು. ವೇದಿಕೆಯಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು‌.

ಶಿಕ್ಷಕ ಸುಮನ್ ಯು‌. ಎಸ್ ಕಾರ್ಯಕ್ರಮವನ್ನು ಸಂಘಟಿಸಿದರು . ವಿದ್ಯಾರ್ಥಿನಿ ಸೃಜನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *