Wed. Dec 31st, 2025

ಉಜಿರೆ: ಶಾಸಕ ಹರೀಶ್ ಪೂಂಜರಿಂದ ಪತ್ರಿಕಾಗೋಷ್ಠಿ – ಜನವರಿ 2 ರಂದು ಉಜಿರೆಯಲ್ಲಿ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಪೌರಸಮ್ಮಾನ

ಉಜಿರೆ: ಪೊಡವಿಗೊಡೆಯ ಉಡುಪಿಯ ಅನ್ನಬ್ರಹ್ಮ ಶ್ರೀ ಕೃಷ್ಣ ದೇವರ ಸನ್ನಿಧಿಯಲ್ಲಿ ಸರ್ವಜ್ಞ ಪೀಠಾರೋಹಣವೇರಿ ಶ್ರೀ ಕೃಷ್ಣ ದೇವರ ಪೂಜಾ ಕೈಂಕರ್ಯ ದೀಕ್ಷೆಯನ್ನು ಸ್ವೀಕರಿಸಲಿರುವ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರ ಪರವಾಗಿ ಗೌರವಪೂರ್ವಕ ಪೌರಸಮ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: 🔶ಮಂಜೊಟ್ಟಿ: ರಾಷ್ಟ್ರಮಟ್ಟದ ಸ್ಪೆಲ್ ಬಿ.ಗ್ರಾಂಡ್ ಫಿನಾಲೆ

ಜನವರಿ 02, 2026 ರಂದು ಉಜಿರೆಯ ಶ್ರೀ ಕೃಷ್ಣ ಸಭಾಭವನದಲ್ಲಿ ಈ ಪೌರಸಮ್ಮಾನ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

ಈ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರು ಉಜಿರೆಯ ಶಾರದಾ ಮಂಟಪದಲ್ಲಿ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿದ್ದರು

ಪತ್ರಿಕಾಗೋಷ್ಠಿಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ ಕೃಷ್ಣ ಪಡ್ವೆಟ್ನಾಯರವರು, ಪೌರ ಸಮ್ಮಾನ ಸಮಿತಿಯ ಸಂಚಾಲಕರಾದ ಕೆ.ಮೋಹನ್‌ ಕುಮಾರ್‌, ಪೌರಸಮ್ಮಾನ ಸಮಿತಿಯ ಕಾರ್ಯದರ್ಶಿ ಪೂರನ್‌ ವರ್ಮ ರವರು ಉಪಸ್ಥಿತರಿದ್ದು, ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

Leave a Reply

Your email address will not be published. Required fields are marked *