ಬೆಳ್ತಂಗಡಿ: ಕಲ್ಮಂಜ ಗ್ರಾಮದ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಬದಿನಡೆ ಕ್ಷೇತ್ರ ಅಲೆಕ್ಕಿ ಇದರ ಆಡಳಿತ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿ, ಗೌರವಾರ್ಪಣೆ ಸಲ್ಲಿಸಲಾಯಿತು.

ಶಾಸಕರ ಭೇಟಿಯ ಸಂದರ್ಭದಲ್ಲಿ, ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು. ಕ್ಷೇತ್ರದ ವತಿಯಿಂದ ಶಾಸಕರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಬದಿನಡೆ ಕ್ಷೇತ್ರ ಅಲೆಕ್ಕಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಮಿತಿಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.



