Fri. Jan 2nd, 2026

ಬೆಳ್ತಂಗಡಿ: ಕಲ್ಮಂಜ ಬದಿನಡೆ ಕ್ಷೇತ್ರ ಅಲೆಕ್ಕಿ ಸಮಿತಿಯಿಂದ ಶಾಸಕರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಬದಿನಡೆ ಕ್ಷೇತ್ರ ಅಲೆಕ್ಕಿ ಇದರ ಆಡಳಿತ ಸಮಿತಿಯ ವತಿಯಿಂದ ಶಾಸಕ ಹರೀಶ್‌ ಪೂಂಜರವರನ್ನು ಭೇಟಿ ಮಾಡಿ, ಗೌರವಾರ್ಪಣೆ ಸಲ್ಲಿಸಲಾಯಿತು.

ಇದನ್ನೂ ಓದಿ: ಮಂಗಳೂರು:(ಜ.3 ಮತ್ತು ಜ.4) ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9ರ ಪ್ರಯುಕ್ತ ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ “ಜಿನ ಭಜನಾ ಸ್ಪರ್ಧೆ”

ಶಾಸಕರ ಭೇಟಿಯ ಸಂದರ್ಭದಲ್ಲಿ, ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು. ಕ್ಷೇತ್ರದ ವತಿಯಿಂದ ಶಾಸಕರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬದಿನಡೆ ಕ್ಷೇತ್ರ ಅಲೆಕ್ಕಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಮಿತಿಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *