ಮಂಗಳೂರು: ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9ರ ಪ್ರಯುಕ್ತ ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ಮಂಗಳೂರು ಜೈನ್ ಮಿಲನ್‌ನ ಆತಿಥ್ಯದಲ್ಲಿ ಜ.3 ಮತ್ತು 4ರಂದು ಪಿಲಿಕುಳ ನಿಸರ್ಗಧಾಮದ ಸ್ಕೌಟ್& ಗೈಡ್ಸ್ ಸಭಾಭವನದಲ್ಲಿ ಸೆಮಿಫೈನಲ್ ಮತ್ತು ಫೈನಲ್ ಜಿನ ಭಜನಾ ಸ್ಪರ್ಧೆ ನಡೆಯಲಿದೆ.

ಇದನ್ನೂ ಓದಿ: ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಜಕರು ಕಾರ್ಯಕ್ರಮದ ಹಿನ್ನಲೆ ಮತ್ತು ಮುನ್ನೋಟವನ್ನು ವಿವರಿಸಿದರು.
ಈ ಸ್ಪರ್ಧೆ ಕಿರಿಯರ ಹಾಗೂ ಹಿರಿಯರ ವಿಭಾಗದಲ್ಲಿ ನಡೆಯಲಿದೆ. ಜ.3ರಂದು ಸೆಮಿಫೈನಲ್ ನಡೆಯಲಿದೆ.ಹಾಗೂ ಜ.4 ರಂದು ಪೈನಲ್ ಕಾರ್ಯಕ್ರಮ ನಡೆಯಲಿದೆ. ವಿಜೇತರಿಗೆ ಫಲಕದ ಜತೆ ನಗದು ಬಹುಮಾನವಿದೆ ಜೈನ ಧರ್ಮದ ತತ್ವ, ಅಹಿಂಸೆ, ಆತ್ಮಶುದ್ಧಿ ಹಾಗೂ ಭಕ್ತಿ ಮಾರ್ಗವನ್ನು ಸಂಗೀತ, ಭಜನೆ ಮತ್ತು ಸಾಂಸ್ಕೃತಿಕ ಅಭಿವ್ಯಕ್ತಿಗಳ ಮೂಲಕ ಜನತೆಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ .

ಜ.3ರಂದು ಬೆಳಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭದಲ್ಲಿ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಸಾನಿಧ್ಯ ವಹಿಸುವರು. ಮಂಗಳೂರಿನ ಹಿರಿಯ ಉದ್ಯಮಿ ದಿಲೀಪ್ ಜೈನ್ ಉದ್ಘಾಟಿಸುವರು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಧರ್ಮಸ್ಥಳ ಸುರೇಂದ್ರಕುಮಾರ್, ರಾಷ್ಟ್ರೀಯ ಉಪಾಧ್ಯಕ್ಷೆ ಅನಿತಾ ಸುರೇಂದ್ರಕುಮಾರ್, ಮಂಗಳೂರು ಜೈನ್ ಮಿಲನ್ ಸ್ಥಾಪಕಾಧ್ಯಕ್ಷ ಕೆ. ಸುರೇಶ್ ಬಲ್ಲಾಳ್, ಪದ್ಮಲತಾ ಮತ್ತು ಡಾ.ನಿರಂಜನ್‌ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉದ್ಯಮಿ ವಿಕಾಸ್ ಜೈನ್ ಭಾಗವಹಿಸುವರು. ಸಂಜೆ ೫ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀತಾ ರಾಜೇಂದ್ರ ಕುಮಾರ್ ಮತ್ತು ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ .
ಜ.4ರಂದು ಬೆಳಗ್ಗೆ 9.30ಕ್ಕೆ ಫೈನಲ್ ಜಿನ ಭಜನಾ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿಶ್ರೀ ಶ್ರೀಮದ್ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಸಾನಿಧ್ಯ ವಹಿಸುವರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆ, ಡಾ.ಹೇಮಾವತಿ ಹೆಗ್ಗಡೆ ಉದ್ಘಾಟಿಸುವರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾರ್ಕಳ ಶ್ರೀ ಜೈನ ಧರ್ಮ ಜೀಣೋದ್ಧಾರಕ ಸಂಘದ ಕಾರ್ಯಾಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು.

ಸಂಜೆ 3.30ಕ್ಕೆ ಡಿ.ಸುರೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಫೈನಲ್ಸ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ಹಿರಿಯ ವಕೀಲ ಪಿ.ಪಿ. ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಟಿ ರಂಜನಿ ರಾಘವನ್, ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್, ಕಟೆಂಟ್ ಕ್ರಿಯೇಟರ್ ಶ್ರದ್ಧಾ ಜೈನ್ ವಿಶೇಷ ಆಹ್ವಾನಿತರಾಗಿದ್ದಾರೆ.

ಜಿನ ಭಜನಾ ಸ್ಪರ್ಧೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲೂ ಆನ್ಲೈನ್ ಲ್ಲಿ ನಡೆದಿದ್ದು ಫೈನಲ್ಸ್ ಕಾರ್ಯಕ್ರಮಕ್ಕೆ ಸಾವಿರಾರು ಬಂಧುಗಳು ಆಗಮಿಸಲಿದ್ದಾರೆ.
ಭಾರತೀಯ ಜೈನ್ ಮಿಲನ್ ಮಂಗಳೂರು ಅಧ್ಯಕ್ಷ -ರತ್ನಾಕರ ಜೈನ್, ವಲಯ -8ರ ಉಪಾಧ್ಯಕ್ಷ -ಸುದರ್ಶನ್ ಜೈನ್ ,ನಿಕಟಪೂರ್ವ ಅಧ್ಯಕ್ಷ -ಪುಷ್ಪರಾಜ್ ಜೈನ್, ಕಾರ್ಯದರ್ಶಿ-ವೈಶಾಲಿ ಪಡಿವಾಳ್, ಕೋಶಾಧಿಕಾರಿ -ಪ್ರಿಯದರ್ಶಿನಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


