ಉಜಿರೆ:ಜ3. ಬಳಸಿದಷ್ಟು ಮುಗಿಯದ ಅಕ್ಷಯಪಾತ್ರೆ ಶಿಕ್ಷಣ, ಶಾಲಾ ಜೀವನದಲ್ಲಿ ಅದರ ಸದುಪಯೋಗವನ್ನು ಪಡೆದು ಹತ್ತನೇ ತರಗತಿ ಮುಗಿಸಿ ತಮ್ಮ ಮುಂದಿನ ಶೈಕ್ಷಣಿಕ ಜೀವನಕ್ಕೆ ಕಾಲಿಡುತ್ತಿರುವ ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಶುಭಮಸ್ತು” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇದನ್ನೂ ಓದಿ: ಉಜಿರೆ: “ಭೀಷ್ಮಾಸ್ತಮಾನ” ನಾಟಕ 11ನೇ ಪ್ರದರ್ಶನ
ಕಾರ್ಯಕ್ರಮದಲ್ಲಿ ಒಂಬತ್ತನೆ ತರಗತಿ ವಿದ್ಯಾರ್ಥಿಗಳು ಸಮೂಹ ಗಾಯನ, ಸಮೂಹ ನೃತ್ಯ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿನೆನಪುಗಳನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರು ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ವಿದ್ಯಾರ್ಥಿ ನಿನಾದ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಮೆಲ್ರಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ನಿಶಾ ವಂದಿಸಿದರು.




