ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ ನಲ್ಲಿ ಬೆಂಗಳೂರಿನ ಟಾಟಾ ಬಿಗ್ ಬಾಸ್ಕೆಟ್ ಸಂಸ್ಥೆಯಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ ಮತ್ತು ಟಾಟಾ ಬಿಗ್ ಬಾಸ್ಕೆಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿಲಾಯಿತು.

ಕಾರ್ಯಕ್ರಮವನ್ನು ಟಾಟಾ ಬಿಗ್ ಬಾಸ್ಕೆಟ್ ಸಂಸ್ಥೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಮಾನವ ಸಂಪನ್ಮೂಲ ಮುಖ್ಯಸ್ಥ ಪ್ರವೀಣ್ ಬಿ.ಎಸ್. ಉದ್ಘಾಟಿಸಿದರು. ಬಳಿಕ ಮಾತನಾಡಿ, ಪ್ರತಿ ಸಂಸ್ಥೆಯ ಬೆಳವಣಿಗೆಯಲ್ಲಿ ಸಂಸ್ಥೆಗಳು ಅನುಸರಿಸುವ ವ್ಯವಹಾರಿಕ ಮೌಲ್ಯಗಳು ಮತ್ತು ಸಂಸ್ಥೆಯ ಸಂಸ್ಕೃತಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಗುಣಮಟ್ಟದ ಸೇವೆ ಮತ್ತು ಜನರೊಂದಿಗೆ ನಿರಂತರ ಸಂಪರ್ಕದಿಂದ ಮಾತ್ರ ಸಂಸ್ಥೆಗಳ ಅಸ್ತಿತ್ವವನ್ನು ಕಾಯ್ದುಕೊಳ್ಳಲು ಸಾಧ್ಯ. ಇ ಕಾಮರ್ಸ್ ಕ್ಷೇತ್ರದಲ್ಲಿ ಇಂದು ವಿಫುಲವಾದ ಅವಕಾಶಗಳಿವೆ. ಅದನ್ನು ವಿದ್ಯಾರ್ಥಿಗಳು ಹೇಗೆ ತಮ್ಮ ನಿರಂತರ ಪ್ರಯತ್ನ ಮತ್ತು ಪ್ರತಿಭೆಯಿಂದ ಪಡೆದುಕೊಳ್ಳಬಹುದು ಎಂಬುದನ್ನು ಅರಿತುಕೊಳ್ಳಬೇಕು ಎಂದರು.
ಸಂಸ್ಥೆಯ ಮತ್ತೊರ್ವ ಪ್ರಾದೇಶಿಕ ಮಾನವ ಸಂಪನ್ಮೂಲ ಮುಖ್ಯಸ್ಥ ವಿಕ್ರಮ್ ರಾಥೋಡ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ದಿನೇ ದಿನೇ ಸ್ಪರ್ಧಿಗಳ ಸಂಖ್ಯೆ ಹೆಚ್ಚುತ್ತಿದೆ. ವಿದ್ಯಾರ್ಥಿಗಳ ಆಸಕ್ತಿ, ಪ್ರತಿಭೆ ಮತ್ತು ಕ್ರೀಯಾತ್ಮಕ ಚಿಂತನೆಗಳು ಹೇಗಿದೆ ಎಂಬುದರ ಮೇರೆಗೆ ಭವಿಷ್ಯ ನಿರ್ಧರಿತವಾಗುತ್ತದೆ. ವಿದ್ಯಾರ್ಥಿಗಳು ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಕೌಶಲ್ಯಗಳನ್ನು ಅರಿತು ಕೊಳ್ಳುವುದರ ಜೊತೆಗೆ ತಂತ್ರಜ್ಞಾನ ಬಳಕೆಯಲ್ಲೂ ಪರಿಣಿತರಾಗ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ್ ಪಿ ಮಾತನಾಡಿ, ಭಾರತದಲ್ಲಿ ಜನಸಂಖ್ಯೆ ಗಣನೀಯವಾಗಿ ಹೆಚ್ಚಿತ್ತಿರುವುದರ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆಗಳೂ ಹೆಚ್ಚುತ್ತಿವೆ. ಈ ನಡುವೆ ಇ – ಕಾಮರ್ಸ್ ಕ್ಷೇತ್ರವಿಂದು ಜಗತ್ವ್ಯಾಪಿಯಾಗಿ ಬೆಳೆದು ನಿಂತಿದೆ. ಸಂಸ್ಥೆಗಳಲ್ಲಿ ಕೌಶಲ್ಯಗಳ ಜೊತೆಗೆ ಸಂಸ್ಕಾರ ಭರಿತವಾದ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಅಭ್ಯರ್ಥಿಗಳ ಅವಶ್ಯಕವಿದೆ. ವೈಯಕ್ತಿಕ ಬದುಕು ಸೇರಿದಂತೆ ಔದ್ಯೋಗಿಕ ಬದುಕಿನಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣ ಬಹು ಮುಖ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ‘ ಟಾಟಾ ಸಂಸ್ಥೆಯ ಉದ್ಯೋಗ ಜೀವನದಲ್ಲಿನ ಅವಕಾಶ ಮತ್ತು ಬೆಳವಣಿಗೆ’ ವಿಷಯದ ಕುರಿತು ವಿದ್ಯಾರ್ಥಿಗಳೊಡನೆ ಸಂವಾದ ನಡೆಯಿತು.
ಇದೇ ಸಂದರ್ಭದಲ್ಲಿ ಭಾರತದ ಅತ್ಯಂತ ಐಕಾನಿಕ್ ವ್ಯವಹಾರ ಸಮೂಹಗಳಲ್ಲಿ ಒಂದಾದ ಟಾಟಾ ಸಂಸ್ಥೆಯ ಆಡಳಿತದಲ್ಲಿರುವ ಟಾಟಾ ಬಿಗ್ ಬಾಸ್ಕೆಟ್ ತಂಡವು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಆಗಮಿಸಿದಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾಲೇಜು ಹಾಗು ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಸಹಭಾಗಿತ್ವದಲ್ಲಿ ಎಸ್.ಡಿ.ಎಂ (ಸ್ವಾಯತ್ತ) ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ. ಅತಿಥಿಗಳಾದ ಪ್ರವೀಣ್ ಬಿ.ಎಸ್ ಮತ್ತು ವಿಕ್ರಮ್ ರಾಥೋಡ್ ಅಭಿನಂದಿಸಿ ಗೌರವಿಸಿದರು. ಈ ವೇಳೆ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿಭಾಗದ ಉಪನ್ಯಾಸಕರಾದ ಪ್ರವೀಣ ಡಿ, ಡಾ. ಶಶಾಂಕ್ ಬಿ.ಎಸ್ ಮತ್ತು ಮಾಧುರಿ ಗೌಡ ಉಪಸ್ಥಿತರಿದ್ದರು. ಕಾಲೇಜಿನ 100 ಕ್ಕೂ ಅಧಿಕ ವಿದ್ಯಾರ್ಥಿಗಳು ಟಾಟಾ ಬಿಗ್ ಬಾಸ್ಕೆಟ್ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆಲ್ಲಿ ಭಾಗವಹಿಸಿದರು. ಕಾರ್ಯಕ್ರಮವನ್ನು ಬಿ.ವೋಕ್ ಕೋರ್ಸ್ ಸಂಯೋಜಕ ಡಾ. ಸುವೀರ್ ಜೈನ್ ಹಾಗು ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ವಿಭಾಗ ಮುಖ್ಯಸ್ಥ ಆಶ್ವಿತ್ ಎಚ್.ಆರ್. ಕಾರ್ಯಕ್ರಮವನ್ನು ಆಯೋಜಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ
ಹರ್ಷಿತಾ ಮತ್ತು ಸಾಮ್ಯ ಗಿರೀಶ್ ನಿರೂಪಿಸಿ, ವಿದ್ಯಾರ್ಥಿ ಭುವನ್ ಎಮ್. ಜೈನ್ ವಂದಿಸಿದರು.


