ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಇದರ ಉದ್ಘಾಟನಾ ಸಮಾರಂಭವು ಇಂದು ನಡೆಯಿತು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯವರಾದ ಶ್ರೀ ಡಿ.ಹರ್ಷೇಂದ್ರ ಕುಮಾರ್ ರವರ ಆಶಯದಂತೆ ಎಸ್ ಡಿ ಯಂ ನ ಎಲ್ಲಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಆಕರ್ಷಿಸಲು ಇಂತಹ ಆಟದ ಅಂಗಣವನ್ನು ನಿರ್ಮಾಣ ಮಾಡುತ್ತಿದ್ದು ಇಂದು ನಮ್ಮ ಶಾಲೆಯಲ್ಲಿ ಶಾಲೆಯ ಸಂಚಾಲಕರಾದ ಶ್ರೀ ಅನಂತ ಪದ್ಮನಾಭ ಭಟ್ ಇವರ ಅಮೃತ ಹಸ್ತದಲ್ಲಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಗೊಂಡಿತು.


ಈ ಒಂದು ಸುಂದರ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕಮಲ್ ತೇಜು ರಜಪೂತ್,ಡಿ ಎಂ ಸಿ ಇಂಜಿನಿಯರ್ ಗಳಾದ ಶ್ರೀ ಯಶೋಧರ್ ಹಾಗೂ ಶ್ರೀ ನಿಖಿಲ್ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಪುಟಾಣಿ ಮಕ್ಕಳು, ಶಾಲಾ ಶಿಕ್ಷಕವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕಿ ಶ್ರೀಜಾ ಇವರು ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸೀಮಾ ಕಾರ್ಯಕ್ರಮಕ್ಕೆ ವಂದನಾರ್ಪಣೆಗೈದರು.



