ಉಜಿರೆ: ಧರ್ಮಸ್ಥಳದ ಸಮೀಪದ ಐತಿಹಾಸಿಕ ಕ್ಷೇತ್ರ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂಭ್ರಮ ಕಳೆಗಟ್ಟಿದೆ. ಈ ಮಹೋತ್ಸವದ ಅಂಗವಾಗಿ ನಿರ್ಮಿಸಲಾದ ನೂತನ ವಿಜಯಗೋಪುರವು ಮಾರ್ಚ್ 4ರಂದು ಅತ್ಯಂತ ವೈಭವದಿಂದ ಲೋಕಾರ್ಪಣೆಗೊಂಡಿತು.

ಕ್ಷೇತ್ರದ ನೂತನ ವಿಜಯಗೋಪುರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕಾಸರಗೋಡು ಎಡನೀರು ಮಠದ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಭದ್ರದೀಪ ಪ್ರಜ್ವಲಿಸಿ ಅನುಗ್ರಹ ಭಾಷಣ ಮಾಡಿದರು.


ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಕ್ಷೇತ್ರಗಳ ಪ್ರಮುಖ ಗಣ್ಯರು ಭಾಗವಹಿಸಿ ಭಕ್ತಿಪೂರ್ವಕ ಶುಭಾಶಯಗಳನ್ನು ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ಹರೀಶ್ ಪೂಂಜ, ಎಂಎಲ್‌ಸಿ ಪ್ರತಾಪ್‌ಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಮತ್ತು ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ., ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ, ಬಾರ್ಕೂರು ಶ್ರೀ ನವಾಕ್ಷರೀ ಸಂಸ್ಕೃತಿ ಚಿಂತಕ ದಾಮೋದರ ಶರ್ಮ,

ಮತ್ತು ಹಿಂದೂ ರಾಷ್ಟ್ರ ಸಭಾ ರಾಜ್ಯಾಧ್ಯಕ್ಷ ಪ್ರತಾಪ ಆರ್. ಗೌಡ., ವಿಜಯ ಗೋಪುರ ಸಮಿತಿ ಪ್ರಧಾನ ಸಂಚಾಲಕ ಕೆ. ಮೋಹನ್ ಕುಮಾರ್, ಕೋಶಾಧಿಕಾರಿ ರಾಜೇಶ್ ಪೈ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಸಫಲ್ಯ ಹಾಗೂ ಮಹಿಳಾ ವಿಭಾಗದ ಸಂಚಾಲಕಿ ಜಯಶ್ರೀ ಪ್ರಕಾಶ ಗೌಡ., ಈ ಕಾರ್ಯಕ್ರಮದಲ್ಲಿ ಕರವೇ ರಾಮಮೂರ್ತಿ, ಉದ್ಯಮಿ ಶ್ರೀಪತಿ ಭಟ್ ಹಾಗೂ ಮಾತೃಶಕ್ತಿ ಶಿಲಾ ಸಂಚಯನ ಅಧ್ಯಕ್ಷೆ ವನಿತಾ ವಿಶ್ವನಾಥ ಶೆಟ್ಟಿ ಸೇರಿದಂತೆ ನೂರಾರು ಭಕ್ತಾದಿಗಳು ಪಾಲ್ಗೊಂಡು ಕ್ಷೇತ್ರದ ನೂತನ ಗೋಪುರದ ಅಂದವನ್ನು ಕಣ್ತುಂಬಿಕೊಂಡರು.







