ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರದಾನ ಕಾರ್ಯಕ್ರಮವು ಮಾರ್ಚ್ 4ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಫಾ! ಅಬೆಲ್ ಲೋಬೊ ರವರು ವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ರವರು ಕುಟುಂಬದೊಂದಿಗೆ ಒಗ್ಗಟ್ಟಾಗಿ ಬದುಕಬೇಕು; ಆದರೆ ಸಂಕಷ್ಟಗಳು ಬಂದಾಗ ಧೈರ್ಯದಿಂದ ಒಬ್ಬಂಟಿಯಾಗಿ ಎದುರಿಸುವ ಮನೋಬಲ ಹೊಂದಿರಬೇಕು ಎಂಬ ಸಂದೇಶವನ್ನು ನೀಡಿದರು.


ವಿದ್ಯಾರ್ಥಿಗಳು ಜಗತ್ತಿನ ಬೆಳಕಾಗುವಂತೆ ದೀಪ ಪ್ರಧಾನ ಮಾಡಲಾಯಿತು. 9ನೇ ತರಗತಿಯ ವಿದ್ಯಾರ್ಥಿ ಜಾಹ್ನವಿ ಎಲ್ಲಾ ಕಿರಿಯ ವಿದ್ಯಾರ್ಥಿಗಳ ಪರವಾಗಿ ಶುಭ ಹಾರೈಸಿದರು. ಕಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಕ್ರೀಡೆಗಳನ್ನು ನಡೆಸಿಕೊಟ್ಟರು.


ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕುಮಾರಿ ಸ್ನೇಹಲ್ ಅಡ್ಲಿನ್ ಡಿ’ಸೋಜ ನಿರೂಪಿಸಿದ ಕಾರ್ಯಕ್ರಮದಲ್ಲಿ, ಗಗನ್ ಡಿ ಸ್ವಾಗತಿಸಿ, ಪಂಚಮ್ ವಂದಿಸಿದರು. ಕಾರ್ಯಕ್ರಮಕ್ಕೆ 9ನೇ ತರಗತಿಯ ಸಹಶಿಕ್ಷಕ ಶ್ರೀ ಗಣೇಶ್ ಹಾಗೂ ಸಹಶಿಕ್ಷಕಿ ಶ್ರೀಮತಿ ಮೇರಿ ಟಿ.ಎಂ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.








