ಉಜಿರೆ: ರಾಷ್ಟ್ರೀಯ ಸುರಕ್ಷತಾ ಸಪ್ತಾಹ ಆಚರಣೆಯ (ಮಾರ್ಚ್ 4 ರಿಂದ ಮಾರ್ಚ್ 8) ಅಂಗವಾಗಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.4 ರಂದು “ನಿರ್ಮಾಣ ಸುರಕ್ಷತೆ ಮತ್ತು ವಿದ್ಯುತ್ ಸುರಕ್ಷತೆ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಜಿರೆ ಎಸ್.ಡಿ.ಎಮ್ ತಂತ್ರಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಸುಬ್ರಹ್ಮಣ್ಯ ಭಟ್ ಹಾಗೂ ಡಾ. ವಿನಯ ಶ್ಯಾಮ್ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.


ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಮೈತ್ರಿ ವಂದಿಸಿ, ವಿದ್ಯಾರ್ಥಿನಿ ಮಾನ್ವಿ ನಿರೂಪಿಸಿದರು.









