ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೊರಿಂಜ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಇದರ ನೇತೃತ್ವದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯ ಕೊರಿಂಜ ದೇವಸ್ಥಾನ ಮತ್ತು ಭಜನಾ ಮಂಡಳಿಯ ಜಂಟಿ ಯಲ್ಲಿ ಕೊರಿಂಜ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ಕೊರಿಂಜ ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಯೋಗೀಶ್ ರವರು ಮಾಡಿ ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು.

ಯೋಜನೆಯ ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ ಯವರು ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ವೈದ್ಯರಾದ ಡಾ. ಸಹನಾ ಕೆ.ಚೀಫ್ ಆಫೀಸರ್ ಇವರು ಅರೋಗ್ಯ ದ ಬಗ್ಗೆ ಮಾಹಿತಿ ನೀಡಿ ಆರೋಗ್ಯವೇ ಭಾಗ್ಯ.

ನಾವು ಆರೋಗ್ಯವಾಗಿದ್ದರೆ ನೆಮ್ಮದಿಯ ಜೀವನ ನಡೆಸಬಹುದು. ಇಂತಹ ಗ್ರಾಮೀಣ ಮಟ್ಟದಲ್ಲಿ ನಡೆಸುವ ಉಚಿತ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆಯಬೇಕು ಎಂದು ಶುಭ ಹಾರೈಸಿದರು. ಸೇವಾಪ್ರತಿನಿಧಿ ಸೀತಾ ರಾಮ ಸ್ವಾಗತಿಸಿ, ಜ್ಞಾನ ವಿಕಾಸ ಸಂಯೋಜಕಿ ಜಲಜಾಕ್ಷಿ ಧನ್ಯವಾದವಿತ್ತರು.






