ಉಜಿರೆ: “ಗೃಹಿಣಿ ಇಲ್ಲದ ಮನೆ ಅರಣ್ಯಕ್ಕೆ ಸಮ. ಸ್ತ್ರೀಯರು ತಮ್ಮ ಪ್ರೀತಿಪಾತ್ರರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ” ಎಂದು ಹಳೆಪೇಟೆ ಸ.ಹಿ.ಪ್ರಾ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಗೀತಾ ರಮಾನಂದ ರಾವ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.9 ರಂದು ಆಯೋಜಿಸಿದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಶೈಕ್ಷಣಿಕ ಸಂಯೋಜಕಿ ಶ್ರೀಮತಿ ಸುಮಾ ಶ್ರೀನಾಥ್ ಉಪಸ್ಥಿತರಿದ್ದರು.
ಶಿಕ್ಷಕಿ ಶ್ರೀಮತಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.










