ಮೊಗ್ರು: ಮುಗೇರಡ್ಕ ಏತ ನೀರಾವರಿ ಯೋಜನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಮೊಗ್ರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪುತ್ತೂರು -ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಮಾ 15 ರಂದು ಸ್ಥಳಕ್ಕೆ ಭೇಟಿ ನೀಡಿ , ಗುಣಮಟ್ಟವನ್ನು ಕಾಪಾಡುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.


ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿರ್ದೇಶಕರಾದ ಪ್ರಭಾಕರ ಗೌಡ ಗುತ್ಯೋಡಿ, ಬಂದಾರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ,

ಬಂದಾರು ಪಂಚಾಯತ್ ಮಾಜಿ ಸದಸ್ಯರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ,ಮುಗೇರಡ್ಕ ಮೂವರು ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ, ಹಿರಿಯರಾದ ರಾಮಣ್ಣ ಗೌಡ ವೈ ಏರ್ಮಾಳ,ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು,ಪ್ರವೀಣ್ ಮತ್ತಿಲಾರು, ಅಶೋಕ ಗೌಡ ಬರುoಗುಡೆಲು, ಜಗದೀಶ್ ಗೌಡ ಅರ್ಬಿ,ಇಲಾಖಾ ಅಧಿಕಾರಿಗಳು, ಗುತ್ತಿಗೆದಾರರು, ಹಲವಾರು ಪ್ರಮುಖರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

Discover more from U Plus TV

Subscribe now to keep reading and get access to the full archive.

Continue reading