ಉಜಿರೆ: ಕಲೆ ಮತ್ತು ಸಾಂಸ್ಕೃತಿಕ ಲೋಕದ ಅದ್ಭುತ ಸಂಗಮಕ್ಕೆ ಧರ್ಮಸ್ಥಳದ ತಪ್ಪಲು ಉಜಿರೆ ಸಜ್ಜಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ, ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮಾರ್ಚ್ 22ರಂದು ಉಜಿರೆಯಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ನಡೆಯಲಿದೆ.

ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ಗಣ್ಯರ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು. ಮಾ 22 ರಂದು ಸಂಜೆ 5.30 ಗಂಟೆಗೆ ಉಜಿರೆ ರಥ ಬೀದಿಯಲ್ಲಿ ಕಾರ್ಯಕ್ರಮ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಮೂರುವರೆ ಗಂಟೆ ಕಾರ್ಯಕ್ರಮದಲ್ಲಿ ಐನೂರು ಕಲಾವಿದರು ಭಾಗವಹಿಸಲಿದ್ದು ಆರು ಸಾವಿರ ಜನರು ಸೇರುವ ನಿರೀಕ್ಷೆ ಇದೆ.



ಸಭೆಯಲ್ಲಿಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ಉದ್ಯಮಿಗಳಾದ ಶಶಿಧರ್ ಶೆಟ್ಟಿ ಬರೋಡ ನವಶಕ್ತಿ, ಲಕ್ಷ್ಮಿ ಇಂಡಸ್ಟ್ರೀಸ್ ನ ಮಾಲಕರಾದ ಕೆ.ಮೋಹನ್ ಕುಮಾರ್, ಎಸ್. ಡಿ.ಎಂ ನಿವೃತ್ತ ಪ್ರಾಂಶುಪಾಲ ಬಿ.ಎ. ಕುಮಾರ ಹೆಗ್ಡೆ, ಅನಂತ್ ಭಟ್ ಮಚ್ಚಿಮಲೆ, ಮೋಹನ್ ಶೆಟ್ಟಿಗಾರ್, ಪುಷ್ಪರಾಜ್ ಶೆಟ್ಟಿ, ರಘುರಾಮ್ ಶೆಟ್ಟಿ ಸಾಧನ ಉಜಿರೆ, ಚಿದಾನಂದ , ದೇವದಾಸ್ ಶೆಟ್ಟಿ ಹಿಬರೋಡಿ, ಉಮೇಶ್ ಶೆಟ್ಟಿ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿ ಅನಿಸಿಕೆ ಅಭಿಪ್ರಾಯ ಹಂಚಿಕೊಂಡು ಕಾರ್ಯಕ್ರಮ ಯಶಸ್ವಿಯ ಬಗ್ಗೆ ಚರ್ಚೆ ನಡೆಸಿದರು.









