ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ, ಗ್ರಾಮೀಣ ಭಾಗದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಶಿಕ್ಷಣ ಲಭಿಸುವಂತಾಗಬೇಕು ಎನ್ನುವುದು ಪೂಜ್ಯರ ಆಶಯವಾಗಿದೆ. ಈ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯು ಮಕ್ಕಳ ಜ್ಞಾನಾರ್ಜನೆಗೆ ಹೊಸ ಆಯಾಮ ನೀಡಲಿದೆ ಎಂದರು.

ಮುಖ್ಯ ಶಿಕ್ಷಕರು ಶ್ಯಾಮಲ ಪಿ.ರವರು ಮಾತನಾಡಿ , ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ತಾವು ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಗಿದೆ. ತಮ್ಮ ಈ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣದ ಮೇಲಿನ ಕಾಳಜಿಗೆ ನಾವು ಸದಾ ಋಣಿಯಾಗಿದ್ದೇವೆ ಎಂದರು.



ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು ಪ್ರೀತ ಕುಮಾರ್, ಪಾಲಡ್ಕ ಒಕ್ಕೂಟ ಅಧ್ಯಕ್ಷರು ಶ್ರೀಮತಿ ಕುಸುಮಾವತಿ, ಶಾಲಾ ಮುಖ್ಯ ಶಿಕ್ಷಕರು, ಗುರು, ಶುಭಲತಾ, ಪುಷ್ಪವತಿ, ಲೀನಾ ವೇಗೌಸ್, ಶ್ರೀಮತಿ ಶ್ರದ್ದಾ , ಸೇವಾಪ್ರತಿನಿಧಿ ಶ್ರೀಮತಿ ನಂದಿನಿ ಹಾಗೂ ಪಾಲಕರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







