ಉಜಿರೆ: ಕಲೆ ಮತ್ತು ಸಾಹಿತ್ಯದ ತವರೂರು ದಕ್ಷಿಣ ಕನ್ನಡದ ಸಾಂಸ್ಕೃತಿಕ ನಕಾಶೆಯಲ್ಲಿ ಉಜಿರೆ ಮತ್ತೊಮ್ಮೆ ಮಿನುಗಲು ಸಜ್ಜಾಗಿದೆ. ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಉಜಿರೆಯ ಶ್ರೀ ಜನಾರ್ದನ ದೇವಳದ ರಥಬೀದಿಯಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮವು ದಿನಾಂಕ 22-03-2026 ರ ಭಾನುವಾರದಂದು ಸಾಯಂಕಾಲ ಗಂಟೆ 6:15 ಕ್ಕೆ ಅದ್ಧೂರಿಯಾಗಿ ಜರುಗಲಿದೆ.

ಈ ಬೃಹತ್ ಸಾಂಸ್ಕೃತಿಕ ಹಬ್ಬದ ಕುರಿತು ಮಾಹಿತಿ ನೀಡಲು ಇಂದು ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ರಥಬೀದಿಯು ಕಲಾಭಿಮಾನಿಗಳನ್ನು ಸ್ವಾಗತಿಸಲು ಸಿದ್ಧವಾಗುತ್ತಿದೆ ಎಂದು ಸಂಘಟಕರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರತಾಪ್ ಸಿಂಹ ನಾಯಕ್, ರವೀಂದ್ರ ಶೆಟ್ಟಿ, ವಸಂತ ಶೆಟ್ಟಿ, ವೆಂಕಟರಮಣ ಶೆಟ್ಟಿ, ಅಂಬರೀಶ್ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ವೈವಿಧ್ಯಮಯ ಸಾಂಸ್ಕೃತಿಕ ಸಂಜೆಯನ್ನು ಯಶಸ್ವಿಗೊಳಿಸಬೇಕೆಂದು ಈ ಸಂದರ್ಭದಲ್ಲಿ ವಿನಂತಿಸಲಾಯಿತು.









