Udupi: ಖುಷಿಯ ಪ್ರವಾಸದಲ್ಲಿ ವಿಧಿಯ ಅಟ್ಟಹಾಸ – ತಾಯಿ, ಮಗಳು ಸ್ಥಳದಲ್ಲೇ ಸಾವು

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಪ್ರವಾಸದ ಖುಷಿಯಲ್ಲಿದ್ದ ಕುಟುಂಬವೊಂದಕ್ಕೆ ವಿಧಿ ಅಟ್ಟಹಾಸ ಮೆರೆದಿದ್ದು, ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ.

ಬೆಂಗಳೂರು ಮೂಲದ ಕುಟುಂಬವೊಂದು ಪ್ರವಾಸಕ್ಕಾಗಿ ಕರಾವಳಿ ಜಿಲ್ಲೆಗೆ ಆಗಮಿಸಿತ್ತು. ಉಡುಪಿಯ ಪ್ರವಾಸಿ ತಾಣಗಳನ್ನು ವೀಕ್ಷಿಸಿ, ಮುರುಡೇಶ್ವರ ಮತ್ತು ಗೋಕರ್ಣದ ಕಡೆಗೆ ತೆರಳುತ್ತಿದ್ದಾಗ ವಿಧಿ ಮಾರ್ಗಮಧ್ಯೆಯೇ ಇವರನ್ನು ಬಲಿಪಡೆದಿದೆ.

ಮಮತಾ (36) ಹಾಗೂ ಮಗಳು ಧೃತಿಕಾ (14) ಸಾವನ್ನಪ್ಪಿದ್ದು, ಮಮತಾ ಪತಿ ರಾಘು (40), ಮಕ್ಕಳಾದ ಜಾಹ್ನವಿ (12), ಚಾರ್ವಿ (10) ಹಾಗೂ ಕಾರು ಚಾಲಕ ಕಿರಣ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತಪಟ್ಟವರು ಬೆಂಗಳೂರು ಮೂಲದವರು ಎನ್ನಲಾಗಿದೆ.
ಪ್ರವಾಸಕ್ಕೆ ಬಂದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ನಂತರ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣ ನಡೆಸುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಗೊಂಡ ತಂದೆ ಮತ್ತು ಇಬ್ಬರು ಮಕ್ಕಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಕಾರು ಚಾಲಕ ಕಿರಣ್‌ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Discover more from U Plus TV

Subscribe now to keep reading and get access to the full archive.

Continue reading